Sunday, September 20, 2026

BDA Apartments

ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಅಧಿಕಾರಿ BDA JK_Adv BDA Adv
Home Crime ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಅಧಿಕಾರಿ

ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಅಧಿಕಾರಿ

ತುಮಕೂರು ,ಮಾರ್ಚ್,21,2026 (www.justkannada.in):  ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಸಹಾಯಕ ನಿರ್ದೇಶಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.

ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ(59)  ಆತ್ಮಹತ್ಯೆಗೆ ಶರಣಾದವರು. ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ  ಕಾರಣವೆಂದು ಉಲ್ಲೇಖಿಸಿದ್ದಾರೆ  ಎನ್ನಲಾಗಿದೆ.

ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

 ಕೃಷ್ಣಪ್ಪ ವಿರುದ್ದ FIR

ಮೃತ ಮಲ್ಲಿಕಾರ್ಜುನ ಪತ್ನಿ ನೀಡಿದ ದೂರು ಆಧರಿಸಿ ಜಂಟಿ ನಿರ್ದೇಶಕ ಕೃಷ್ಣಪ್ಪ ವಿರುದ್ದ ಪಾವಗಡ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Government official, commits suicide , office