Friday, September 18, 2026

BDA Apartments

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Front Page ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್, 21,2026 (www.justkannada.in): ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.

ಇಂದು   ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.

ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ  ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.

Key words: pray, well-being, humanity, CM, Siddaramaiah