ಬೆಂಗಳೂರು,ಮಾರ್ಚ್,24,2026 (www.justkannada.in): ವಿಧಾನಮಂಡಲ ಅಧಿವೇಶನವನ್ನ ಒಂದು ದಿನ ಮೊಟಕುಗೊಳಿಸಲಾಗಿದೆ.
ಮಾರ್ಚ್ 27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್ 26 ರಂದು ಕೊನೆಗೊಳ್ಳಲಿದೆ. ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ಮಾರ್ಚ್ 27 ರಂದು ರಾಮನವಮಿ ಹಿನ್ನೆಲೆಯಲ್ಲಿ ಅಧಿವೇಶನವನ್ನ ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Legislative session, Short, One day







