ನವದೆಹಲಿ,ಮಾರ್ಚ್,24,2026 (www.justkannada.in): ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಯಾವುದೇ ಕೊರತೆ ಇಲ್ಲ ಆತಂಕ ಬೇಡ. ವದಂತಿ ನಂಬಬೇಡಿ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಜಂಟಿ ಕಾರ್ಯದರ್ಶಿ ಸುಜಾತ ಶರ್ಮ, ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇತರ ಮೂಲಗಳ ಮೂಲಕ ಹರಡುವ ತಪ್ಪು ಮಾಹಿತಿಯನ್ನು ಜನರು ನಂಬಬಾರದು. ತೈಲ ಕಂಪನಿಗಳು ನಿರಂತರವಾಗಿ ಪೂರೈಕೆಯನ್ನು ನಿರ್ವಹಿಸುತ್ತಿವೆ, ಆದ್ದರಿಂದ ಸಾರ್ವಜನಿಕರಿಗೆ ಆತಂಕ ಬೇಡ ಎಂದಿದ್ದಾರೆ.
Key words: no shortage, petrol, diesel, Centre, clarifies







