ನವದೆಹಲಿ,ಮಾರ್ಚ್,26,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು ಹೋಟೆಲ್ ಉದ್ಯಮ ತಾತ್ಕಾಲಿಕ ಬಂದ್ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೇ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಕುರಿತು ರಾಜ್ಯಗಳ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು, ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಈ ನಡುವೆ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಕಾರಣದಿಂದ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. “ಚುನಾವಣೆ ನಡೆಯುವ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ನಡೆಯಲಿದ್ದು, ಇದನ್ನು ಸಂಪುಟ ಸಚಿವಾಲಯದ ಮೂಲಕ ನಡೆಸಲಾಗುತ್ತದೆ” ಎಂದು ಪ್ರಧಾನಿ ಕಚೇರಿ ತಿಳಿಸಿದೆ.
Key words: PM Modi, meet, CMs, all states, tomorrow







