ಬೆಂಗಳೂರು,ಮಾರ್ಚ್,28,2026 (www.justkannada.in): ಸಿಎಂ ಸಿದ್ದರಾಮಯ್ಯ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಸಂಜೆ 4 ಗಂಟೆಗೆ ವಿಶ್ವೇಶ್ವರ ನಗರದಲ್ಲಿನ ಜಿ.ಸಿ ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 5 ಗಂಟೆಗೆ ಪ್ರಜಾವಾಣಿ ಸಾಧಕಿಯರು-2026 ವತಿಯಿಂದ ಅವಳ ಸಾಧನೆ ಸಂಭ್ರಮ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಸಿದ್ದರಾಮಯ್ಯ ನಾಳೆ ಅಂದರೆ ಮಾ.29 ರಂದು ಬೆಳಿಗ್ಗೆ 8 ಗಂಟೆಗೆ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಘಟಕ 46ನೇ ತಂಡದ ಪೊಲೀಸ್ ಉಪನಿರೀಕ್ಷಕರು(ಸಿವಿಲ್) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಬೆಳಿಗ್ಗೆ 10.30ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ತೆರಳುವರು.
Key words: CM Siddaramaiah, tour, Mysuru district







