ಬೆಂಗಳೂರು,ಮಾರ್ಚ್,28,2026 (www.justkannada.in): ಶಾಸಕರಿಗೆ ಉಚಿತ ಐಪಿಎಲ್ ಟಿಕೆಟ್ ನೀಡುವ ಸರ್ಕಾರದ ನಿರ್ಧಾರ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಧಾನಸಭೆಯ ಸ್ಪೀಕರ್ ಗೆ ಪತ್ರ ಬರೆದಿರುವಂತ ಶಾಸಕ ಸುರೇಶ್ ಕುಮಾರ್ ಅವರು, ಶಾಸಕರಿಗೆ ನೀಡಲಾಗುವ ಐಪಿಎಲ್ ಟಿಕೆಟ್ ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ. ತಮ್ಮ ಹೆಸರಲ್ಲಿ ಯಾವುದೇ ಟಿಕೆಟ್ ಪಾಸ್ ವಿತರಿಸದಂತೆ ಸ್ಪೀಕರ್ ಗೆ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿಚಾರ ಪ್ರಸ್ತಾಪಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸುರೇಶ್ ಕುಮಾರ್, ಜನಸಾಮಾನ್ಯರು ಪಡುತ್ತಿರುವ ಕಷ್ಟಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಯಬೇಕಿತ್ತು. ಆದರೆ, ಅದರ ಬದಲಾಗಿ ಐಪಿಎಲ್ ಟಿಕೆಟ್ ಸಿಗುತ್ತಿಲ್ಲ, ಶಾಸಕರಿಗೆ ಮರ್ಯಾದೆ ಇಲ್ಲ ಎಂಬ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆದದ್ದು ದುರದೃಷ್ಟಕರ ಎಂದಿದ್ದಾರೆ.
“ನಮ್ಮ ಅದೆಷ್ಟೋ ಪ್ರಶ್ನೆಗಳಿಗೆ ವರ್ಷಾನುಗಟ್ಟಲೆ ಫಲಿತಾಂಶ ಸಿಕ್ಕಿರುವುದಿಲ್ಲ. ಆದರೆ, ಶಾಸಕರ ವಿಷಯ ಬಂದ ತಕ್ಷಣ 24 ಗಂಟೆಯೊಳಗೆ ಸರ್ಕಾರ ಟಿಕೆಟ್ ಘೋಷಣೆ ಮಾಡಿದೆ. ದಯವಿಟ್ಟು ನನಗೆ ಆ ಟಿಕೆಟ್ ಖಂಡಿತ ಬೇಡ. ಈ ವಿಐಪಿ ಸಂಸ್ಕೃತಿ ನಮ್ಮನ್ನು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿ ಮಾಡುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
Key words: IPL ticket, MLA, S. Suresh Kumar Letter, Speaker







