Monday, September 28, 2026

BDA Apartments

ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ BD...
Home Front Page ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು, ಮಾರ್ಚ್, 28,2026 (www.justkannada.in): ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಇಂದು 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು.

ಶೇ 30 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾರ್ಚ್ 2027 ರೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ  ಅಧಿಕಾರಿಗಳಿಗೆ  ಸಚಿವ ಹೆಚ್ ಸಿ ಮಹದೇವಪ್ಪ ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಟಿ.ಸಿ  ಗ್ರಾಮೀಣ ವಿಭಾಗದ ಜಿಲ್ಲಾ ನಿಯಂತ್ರಕ ಶ್ರೀನಿವಾಸ್ ಅವರು ಕಾಮಗಾರಿ ಕುರಿತಂತೆ ಮಾಹಿತಿ ನೀಡಿ ಬನ್ನಿಮಂಟಪದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಕೆ.ಎಸ್.ಆರ್.ಟಿಸಿ ಬಸ್ ಗಳು ಬಸ್ ನಿಲ್ದಾಣದ ಒಳಗೆ ಹಾಗೂ ಹೊರ ಭಾಗಕ್ಕೆ ಹೋಗಲು ಪ್ರತ್ಯೇಕ 100 ಅಡಿ ರಸ್ತೆಯ ಅವಶ್ಯಕತೆ ಇರುವುದಾಗಿ ಸಚಿವರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್‌ ಸಿ ಮಹದೇವಪ್ಪ, ಬಸ್ ನಿಲ್ದಾಣ ನಿರ್ಮಾಣಕ್ಕೆ ಬೇಕಿರುವ ಎಲ್ಲಾ ಸೌಲಭ್ಯವನ್ನು ಒದಗಿಸಲಾಗುವುದು. 100 ಅಡಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Minister, H.C. Mahadevappa, Mysore, new bus stand