ಬಾಗಲಕೋಟೆ,ಮಾರ್ಚ್,30,2026 (www.justkannada.in): ಉದ್ಯೋಗ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಸರ್ಕಾರಕ್ಕೆ ಬುದ್ದಿ ಕಲಿಸಲು ಜನ ರೆಡಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ದ ಮತದಾರರು ಬೇಸತ್ತಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ನೀಡುವಲ್ಲಿ ಯಶಸ್ವಿಯಾಗಿಲ್ಲ. ಸರ್ಕಾರಕ್ಕೆ ಬುದ್ದಿಕಲಿಸಲು ಜನರು ರೆಡಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ರಾಜಕೀಯ ಪುನರ್ಜನ್ಮ ನೀಡಿದೆ. ಆದರೆ ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಏನು ಇಲ್ಲ ಮತದಾರರು ಎರಡೂ ಕ್ಷೇತ್ರಗಳಲ್ಲಿ ಬದಲಾವಣೆ ಬಯಸಿದ್ದಾರೆ ಎಂದರು.
ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಮಾಹಿತಿ ಇರುವುದರಿಂದ ಸಿಎಂ ಸಿದ್ದರಾಮಯ್ಯ ಇಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲೂ ಹೀಗೆ ಮಾಡಿದ್ದಾರೆ. ಹಣ ಬಲ ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದರು.
Key words: Government, failed, jobs, People, BY Vijayendra







