ದಾವಣಗೆರೆ,ಏಪ್ರಿಲ್,1,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು ಪ್ರಚಾರಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ತೆರಳಲಿದ್ದಾರೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇಂದು ಗ್ರಾಮಾಂತರ ಪ್ರದೇಶಗಳಲ್ಲಿ ಸಿಎಂ ಮತಯಾಚನೆ ಮಾಡಲಿದ್ದಾರೆ. ನಾಳೆ ನಗರ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ರೋಡ್ ಶೋ ಮಾಡುತ್ತಾರೆ ಎಂದರು.
ಏಪ್ರಿಲ್ 5 ರಂದು ಸಚಿವ ಜಮೀರ್ ಅಹ್ಮದ್ ಖಾನ್ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ. ಕೇರಳದಲ್ಲಿ ಪ್ರಚಾರ ಮುಗಿಸಿ ದಾವಣಗೆರೆಗೆ ಜಮೀರ್ ಬರುತ್ತಾರೆ ಎಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು.
Key words: CM Siddaramaiah, campaign, Minister, S.S. Mallikarjun







