ದಾವಣಗೆರೆ,ಏಪ್ರಿಲ್,1,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ದಾವಣಗೆರೆ ನಾಗನೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಸಿಎಂ ಸಿದ್ದರಾಮಯ್ಯ ರೋಡ್ ಶೋ ನಡೆಸಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ದಾವಣಗೆರೆಗೆ ಶಾಮನೂರು ಕೊಡುಗೆ ಸಾಕಷ್ಟಿದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದರು.
ನಮ್ಮ ಮೂಲ ಉದ್ದೇಶ ತಳ ಸಮುದಾಯದ ಅಭಿವೃದ್ದಿ. ಬಸವಣ್ಣ ಅವರ ಪರಿಕಲ್ಪನೆಯಲ್ಲಿ ನಾವು ಸರ್ಕಾರ ನಡೆಸುತ್ತಿದ್ದೇವೆ. ಮಧ್ಯವರ್ತಿಗಳ ಕಾಟ ಇಲ್ಲದೆ ಬಡವರ ಖಾತೆಗೆ ಹಣ ಹಾಕುತ್ತಿದ್ದೇವೆ ಎಂದರು.
ಗ್ಯಾರಂಟಿಯಿಂದ ಖಜಾನೆ ಖಾಲಿ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಾವು 1.40 ಕೋಟಿ ರೂ ಸಾಲ ಮಾಡಿದ್ದೇವೆ. ಬಿಜೆಪಿಯವರು 5.30 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ ಎಂದರು.
Key words: Samarth Shamanur, Davanagere by-election, CM Siddaramaiah







