Saturday, August 15, 2026

BDA Apartments

Home Crime ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ, ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಡಾಕ್ಟರ್ ಮಲ್ಲುವನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಾಂಧಿ ನಗರದಲ್ಲಿರುವ ನರಸಿಂಹ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದೆ .ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಡಾಕ್ಟರ್ ಮಲ್ಲು ವಿರುದ್ದ ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಮಹಿಳಾ ಸಿಬ್ಬಂದಿ ಜೊತೆಗೆ ಆರೋಪಿ ಡಾಕ್ಟರ್ ಮಲ್ಲು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆ ಸಂಭಂದ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು  ದೂರಿನ ಆಧಾರದ ಮೇಲೆ ಸದ್ಯ ಡಾಕ್ಟರ್ ಮಲ್ಲುನನ್ನು ಪೊಲೀಸರು ಬಂಧಿಸಿದ್ದಾರೆ.

Key words: State Nursing Council, registrar, arrested, sexually harassing , staff