Tuesday, September 15, 2026

BDA Apartments

ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್ BDA...
Home Front Page ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್

ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್

ದಾವಣಗೆರೆ,ಏಪ್ರಿಲ್,2,2026 (www.justkannada.in): ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಆರ್.ಅಶೋಕ್,ಈ ಉಪಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರನ್ನ ಗೆಲ್ಲಿಸಬೇಕು.  ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಶ್ರೀಮಂತರಿಗೆ ಯಾರೂ ಮತ ಹಾಕಬೇಡಿ ಎಂದು ಹೇಳಿದ್ದಾರೆ. ಅಂದ್ರೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪಗೆ ವೋಟ್ ಹಾಕಿ ಎಂದರ್ಥ ಎಂದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡುತ್ತಿರುವುದು ಕೇಂದ್ರ ಸರ್ಕಾರ ಮಾತ್ರ.  2 ರೂ. ಚೀಲ ಕೊಡುತ್ತಿರುವುದು ಸಿದ್ದರಾಮಯ್ಯ ಸರ್ಕಾರ. ಸಾಮಾನ್ಯ ಕಾರ್ಯಕರ್ತನ ವಿರುದ್ದ ಇಡೀ ಸರ್ಕಾರವೇ ಬಂದಿದೆ.  ಅವೆರೆಲ್ಲರೂ ಬರಿಗೈಯಲ್ಲಿ ಬಂದಿಲ್ಲ. ಚೀಲದಲ್ಲಿ ಹಣ ತಂದಿದ್ದಾರೆ. ಒಂದೊಂದು ಬೂತ್ ನಲ್ಲಿ ಮೂವರು ಸಚಿವರು ಶಾಸಕರು ಇದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words: CM Siddaramaiah, campaigning, BJP, R. Ashok