Thursday, August 20, 2026

BDA Apartments

Home Crime ಮದುವೆಯಾಗದಕ್ಕೆ, ನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಯಾಗದಕ್ಕೆ, ನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಮಗಳೂರು,ಏಪ್ರಿಲ್,4,2026 (www.justkannada.in):  ಮದುವೆಯಾಗದ್ದಕ್ಕೆ ಕುರಿಗಾಹಿ ಯುವಕನೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವರದಿಯಾಗಿದೆ.

ಚಿಕ್ಕಮಗಳೂರಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ಕುರಿಗಾಹಿ ಯುವಕ ಕುಮಾರ (26) ಆತ್ಮಹತ್ಯೆಗೆ ಶರಣಾಗಿದ್ದಾನೆ ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡು ಯುವಕ ನೇಣಿಗೆ ಶರಣಾಗಿದ್ದಾನೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಕುಮಾರ್, ತಾಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಅವರ ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ  ಒತ್ತಾಯಿಸಿದ್ದಾನೆ ಎನ್ನಲಾಗಿದೆ.

ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡುತ್ತೇವೆ ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರು ಎಂದು ಮನೆಯವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮದುವೆ ವಿಚಾರದಲ್ಲಿ ಮಾನಸಿಕವಾಗಿ ‌ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ  ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  young man, suicide, marriage