ದಾವಣಗೆರೆ,ಏಪ್ರಿಲ್,4,2026 (www.justkannada.in): ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದರು.
ಪ್ರಕರಣದ ಬಗ್ಗೆ ಎಲ್ಲ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇಣೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಇಂತಹ ಕೇಸ್ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದು ಪರಮೇಶ್ವರ್ ತಿಳಿಸಿದರು.
Key words: Hubballi, love jihad, allegation case, Home Minister, Parameshwar







