Sunday, August 23, 2026

BDA Apartments

Home Front Page ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು,ಏಪ್ರಿಲ್,8,2026 (www.justkannada.in):  ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ  ಪ್ರಕಟಿಸುವ ಸಾಧ್ಯತೆ ಇದೆ. ನಾಳೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿದ್ದು ಮತದಾನ ಮುಗಿದ ನಂತರ ಫಲಿತಾಂಶ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಫಲಿತಾಂಶವನ್ನ ನೋಡಬಹುದಾಗಿದೆ. ಈಗಾಗಲೇ ಫಲಿತಾಂಶ ಪ್ರಕಟಿಸಲು ಪಿಯು ಬೋರ್ಡ್ ಸಿದ್ದತೆ ನಡೆಸಿದ್ದು, ಈ ಬಾರಿ ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆಯನ್ನ ಸಚಿವ ಮಧು ಬಂಗಾರಪ್ಪ ಹೊಂದಿದ್ದಾರೆ.

Key words: Second PU, results, announced, tomorrow