Tuesday, August 25, 2026

BDA Apartments

Home Front Page ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು,ಏಪ್ರಿಲ್,9,2026 (www.justkannada.in): 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು  ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳ ಮೊಬೈಲ್ ಗೂ ಎಸ್ ಎಂಎಸ್ ಮೂಲಕ ಫಲಿತಾಂಶ ರವಾನೆಯಾಗಲಿದೆ.

ಪರೀಕ್ಷೆ ಬರೆದಿದ್ದ 7.10,363 ವಿದ್ಯಾರ್ಥಿಗಳ ಪೈಕಿ  6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಯಾಗಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.

Key words: Second PUC, results, announced