ಕಲಬುರಗಿ,ಏಪ್ರಿಲ್,9,2026 (www.justkannada.in): ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು.
ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
Key words: We, will ,win, both, constituencies, Minister, Priyank Kharge







