ಅಲಹಾಬಾದ್,ಏಪ್ರಿಲ್,10,2026 (www.justkannada.in): ನಿವಾಸದಲ್ಲಿ ಬೆಂಕಿ ಹತ್ತಿಕೊಂಡಿದ್ದ ವೇಳೆ ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಆರೋಪಗಳ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. 
ನಿವಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಪತ್ತೆಯಾದ ವಿವಾದದ ನಂತರ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು. ಇದೀಗ ರಾಷ್ಟ್ರಪತಿ ಅವರಿಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸಕ್ಕೆ 2025 ಮಾರ್ಚ್ 14 ರಂದು ಬೆಂಕಿಯ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ನಿವಾಸದಲ್ಲಿ ದೊಡ್ಡ ಮೊತ್ತದ ನಗದು ಪತ್ತೆಯಾಗಿತ್ತು. ಈ ವಿಷಯದ ಕುರಿತು ಸುಪ್ರೀಂ ಕೋರ್ಟ್ ತನಿಖಾ ವರದಿಯನ್ನು ಸಹ ಪ್ರಕಟಿಸಿತ್ತು. 2025 ಜುಲೈ 21 ರಂದು ಲೋಕಸಭೆ ಮತ್ತು ರಾಜ್ಯಸಭೆಯ 200 ಕ್ಕೂ ಹೆಚ್ಚು ಸಂಸದರು ಅವರನ್ನು ದೋಷಾರೋಪಣೆ ಮಾಡಲು ಸಂಸತ್ತಿನಲ್ಲಿ ಒಂದು ನಿರ್ಣಯಕ್ಕೆ ಸಹಿ ಹಾಕಿದ್ದರು. 2025 ಆಗಸ್ಟ್ 12 ರಂದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವರ್ಮಾ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮೂವರು ಸದಸ್ಯರ ತನಿಖಾ ಸಮಿತಿ ರಚಿಸಿದ್ದರು.
ಈಗ ದೋಷಾರೋಪಣೆಗಳ ಪ್ರಕ್ರಿಯೆಗಳ ನಡುವೆಯೇ ಯಶವಂತ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
Key words: Allahabad, High Court, Justice, Yashwant Verma, resigns







