Sunday, October 11, 2026

Dasara Wishes

BJP DasraWishes_JK DasraWishes JK
Happy Dasara
Home Front Page ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್

ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್

ಮಂಗಳೂರು,ಏಪ್ರಿಲ್,10,2026 (www.justkannada.in): ಉಪಚುನಾವಣೆಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ  ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.  ನಾಯಕತ್ವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ.  ನಾಯಕತ್ವ ಬಗ್ಗೆ ನಾವು ಚರ್ಚೆ ಮಾಡುವ ಅನಿವಾರ್ಯತೆ ಇಲ್ಲ ಎಂದರು.

ಉಪಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುವ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಎಲ್ಲಾ ವರ್ಗದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ.  ನಮ್ಮಲ್ಲೂ ಯಾರನ್ನೂ ದೂರ ಮಾಡುವ ಪ್ರಶ್ನೆ ಇಲ್ಲ. ದಾವಣಗೆರೆಯಲ್ಲಿ ಹೆಚ್ಚುಮತಗಳ ಅಂತರದಲ್ಲಿ ಸಮರ್ಥ್ ಗೆಲ್ಲುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Key words: By-election, leadership change, Minister, Dinesh Gundu Rao