Sunday, September 13, 2026

BDA Apartments

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ BDA JK_Adv BDA Adv
Home Front Page ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದ್ದು ಶಿಶುವನ್ನು ರಕ್ಷಣೆ ಮಾಡಲಾಗಿದೆ.

ಬೇತ್ರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ  ಯಾರೋ ನವಜಾತ ಶಿಶುವನ್ನು ಬಾಳೆ ಹಾಳೆಯ ಮೇಲೆ ಮಲಗಿಸಿ ಹೋಗಿದ್ದು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದು  ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Newborn, baby girl, found, rescued, Kodagu