Sunday, September 20, 2026

BDA Apartments

ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ BDA JK_Adv BDA Adv
Home Front Page ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ,ಏಪ್ರಿಲ್,15,2026 (www.justkannada.in): ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

ಈಗಾಗಲೇ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಪ್ರಧಾನಿ ಮೋದಿ ತೆರಳಿದ್ದು 10.50ಕ್ಕೆ ತಪೋವನ  ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ  ರಸ್ತೆ ಮೂಲಕ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಮೊದಲು ಗೋರಕ್ಷಕನಾಥರು ತಪಸ್ಸು ಮಾಡಿದಜ್ವಾಲಪೀಠದ ದರ್ಶನ ಪಡೆದು ನಂತರ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶ್ರೀಗುರು ಬೈರವೈಕ್ತ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.

Key words: PM Narendra Modi, visit, Adi Chunchanagiri, today