Sunday, September 13, 2026

BDA Apartments

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ BDA JK_Adv BDA Adv
Home Front Page ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಸಾಮ್ರಾಟ್ ಚೌಧರಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಬಿಜೆಪಿಯ ಸಾಮ್ರಾಟ್ ಚೌಧರಿ  ಅವರನ್ನು ಬಿಹಾರ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಇಂದು  ಪಾಟ್ನಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ  ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.  ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಲ್ಲದೆ ಜೆಡಿಯುನ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಾಮ್ರಾಟ್ ಚೌಧರಿ ಬಿಹಾರ ರಾಜ್ಯದ ಮೊದಲ ಬಿಜೆಪಿಯಿಂದ ಮೊದಲ ಸಿಎಂ  ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಾರಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.  2017ರಲ್ಲಿ ಜನತಾ ಪಕ್ಷ ಸೇರ್ಪಡೆಯಾದ ಸಾಮ್ರಾಟ್ ಚೌದರಿ,  2023ರಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷರಾಗಿ 2024ರಲ್ಲಿ ಎನ್ ಡಿಎ ಮೈತ್ರಿಕೂಟದ ಡಿಸಿಎಂ ಆಗಿದ್ದರು .

Key words: Samrat Chaudhary, takes ,oath, new CM, Bihar