Sunday, September 13, 2026

BDA Apartments

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರ...
Home Crime ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ.

ಪ್ರಕರಣ ಸಂಬಂಧ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ಅಪರಾಧಿಗಳು ಎಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು ಅಪರಾಧಿಗಳನ್ನ ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಧೀಶರು ಸೂಚನೆ ನೀಡಿದರು.

ನಾಳೇ ಶಿಕ್ಷೆಯ ಪ್ರಮಾಣದ ಬಗ್ಗೆ ವಾದ ಮಂಡನೆಯಾಗಲಿದೆ. ಪ್ರಕರಣದ ಎ20, ಎ21 ಬಿಡುಗಡೆಗೆ ಕೋರ್ಟ್ ಆದೇಶ ಮಾಡಿದೆ ಎನ್ನಲಾಗಿದೆ.

Key words: Yogesh Gowda, murder case,  MLA, Vinay Kulkarni, convicted, Court