ಬೆಂಗಳೂರು,ಏಪ್ರಿಲ್,16,2026 (www.justkannada.in): ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಸಾಬೀತಾಗಿದ್ದು ಈ ಕುರಿತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಆಗಬೇಕಿತ್ತು. ಹಿಂದುತ್ವದ ಹೋರಾಟಗಾರರು ಬಿಜೆಪಿಯವರನ್ನು ಕೊಂದವರಿಗೆ ಇದೇ ಶಿಕ್ಷೆ ಎಂದರು.
ಯಾರಿಂದಲೂ ದುಡ್ಡು ಕೊಟ್ಟು ಕೊಂಡುಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಪುನ್ನು ನಾವು ಗೌರವಿಸುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
Key words: Yogish gowda, Murder case, MLA, Vinay kulkarni, Chalavadi Narayana swmy







