ಬೆಂಗಳೂರು,ಏಪ್ರಿಲ್,20,2026 (www.justkannada.in): ಬಿಟ್ ಕಾಯಿನ್ ಮೂಲಕ ಕಾಂಗ್ರೆಸ್ ನಾಯಕರು ವಿವಿಧ ದೇಶಗಳಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಿದ್ದು, ತಪ್ಪು ಮಾಡಿದವರು ಯಾರೇ ಆಗಲ್ಲಿ ಶಿಕ್ಷೆಯಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ನಿರಂತರವಾಗಿ ಆರ್ಥಿಕ ಅಪರಾಧಗಳಲ್ಲಿ ತೊಡಗಿದ್ದು ಬಂದಿದೆ. ಬಿಟ್ ಕಾಯಿನ್ ಹಗರಣವು ಇದರ ಒಂದು ಭಾಗವಾಗಿದೆ. “ಯಾವುದೇ ನಿಖರವಾದ ಮಾಹಿತಿ ಅಥವಾ ಆಧಾರವಿಲ್ಲದೆ ತನಿಖಾ ಸಂಸ್ಥೆಗಳು ದಾಳಿ ನಡೆಸುವುದಿಲ್ಲ. ವಿದೇಶಗಳಲ್ಲಿ ಅಕ್ರಮವಾಗಿ ಹೂಡಿಕೆ ಮಾಡಲಾಗಿದೆ ಎಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದ ಕೂಪವಾಗಿದೆ. ಈ ಹಗರಣದ ಸಮಗ್ರ ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಇಂತಹ ಭ್ರಷ್ಟಾಚಾರದಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
Key words: congress, Illegal investment, Bitcoin, Union Minister, Shobha Karandlaje







