ಪಹಲ್ಗಾಮ್  ಭಯೋತ್ಪಾದಕರು ದಾಳಿಗೆ ಒಂದು ವರ್ಷ:  ಮೃತಪಟ್ಟವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ

ನವದೆಹಲಿ,ಏಪ್ರಿಲ್,22,2026 (www.justkannada.in): ಜಮ್ಮುಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರು ನಡೆಸಿದ ದಾಳಿಗೆ 26 ಮಂದಿ ಮೃತಪಟ್ಟ ಘಟನೆಗೆ ಒಂದು ವರ್ಷವಾಗಿದ್ದು. ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಮುಗ್ಧ ಜೀವಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ನಷ್ಟವನ್ನ ನಿಭಾಯಿಸುತ್ತಿರುವ ದುಃಖಿತ ಕುಟುಂಬಗಳೊಂದಿಗೆ ನನ್ನ  ಸಂತಾಪಗಳು ಎಂದಿದ್ದಾರೆ.

ಹಾಗೆಯೇ ಭಾರತ ಯಾವುದೇ ಕಾರಣಕ್ಕೂ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ. ಭಯೋತ್ಪಾದಕರ ಹೇಯ  ಕೃತ್ಯಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Key words: Pahalgam, terror attack, One year, PM Modi