Saturday, September 12, 2026

BDA Apartments

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ...
Home Front Page ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗಲಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತದೆ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಿ.ಸುರೇಶ್ ಗೌಡ, ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿಎಂ ಆಗಬೇಕು ಅಂತಾ ಪರಮೇಶ್ವರ್  ರೇಸ್ ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ರೇಸ್ ನಲ್ಲಿದ್ದಾರೆ. ಅತ್ತ ಎಂ.ಬಿ ಪಾಟೀಲ್ ಸಹ ಸಿಎಂ ಆಗಬೇಕು ಅಂತಾ ಇದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ಆಗೋಗಿದ್ದಾರೆ ಮೇ 10ಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ ಎಂದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಈಗ ಚುನಾವಣೆ ನಡೆದರೂ ಮೈತ್ರಿಕೂಟ 175 ಸ್ಥಾನ ಗೆಲ್ಲುತ್ತೆ ಎಂದು ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.

Key words: Revolution, state politics, after, May 5, BJP MLA, Suresh gowda