Saturday, September 12, 2026

BDA Apartments

Home Front Page ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಏಪ್ರಿಲ್,24,2026 (www.justkannada.in):  ರಾಜ್ಯದಲ್ಲಿ ಕಗ್ಗಂಟಾಗಿರುವ ಒಳ ಮೀಸಲಾತಿ ಗೊಂದಲ ವಿಚಾರ ಕುರಿತು ಇಂದು ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತಿದೆ.

ಸಭೆಗೂ ಮುನ್ನ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಒಳಮೀಸಲಾತಿ ಒಬ್ಬರೇ ತೀರ್ಮಾನ ಮಾಡಲು ಆಗಲ್ಲ.  ಸಿಎಂ ಡಿಸಿಎಂ ಸೇರಿ ಎಲ್ಲರೂ ಸೇರಿ ನಿರ್ಧಾರ ಮಾಡಬೇಕು. ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ . ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ ಮಾಡುತ್ತೇವೆ ಎಂದರು.

ಇಂದು ಒಳಮೀಸಲಾತಿ ಬಗ್ಗೆ ಅಂತಿಮನ ನಿರ್ಧಾರ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಕ್ಯಾಬಿನೆಟ್ ಸಭೆ ನಡೆಯುತ್ತಿದೆ.

Key words: Internal reservation, Discuss, Minister, K.H. Muniyappa