Sunday, September 13, 2026

BDA Apartments

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ BDA JK_Adv BDA Adv
Home Front Page ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಿ, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕು ಎಂದು ಆಗ್ರಹಿಸಿದೆ.

ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿತ್ತು.  ನಿಯಮ ಇಲ್ಲದಿದ್ದರೂ ಜನಿವಾರ ತೆಗೆಸಿರುವುದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬೆನ್ನಲ್ಲೇ ಬೆಂಗಳೂರಿನ ಮಡಿವಾಳ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

Key words: Janiwar, Brahmin Mahasabha, Letter, CM