ಬೆಂಗಳೂರು,ಏಪ್ರಿಲ್,29,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರೀಲ್ 14 ರಂದೇ ನಟ ದರ್ಶನ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಲಾಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ, ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
Key words: Actor, Darshan, bail application, Supreme Court







