ಬೆಳಗಾವಿ,ಮೇ,1,2026 (www.justkannada.in): ದೇಶದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ್ 993 ರೂಪಾಯಿ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಚುನಾವಣೆಯ ಬಳಿಕ ಜನರಿಗೆ ಮತ್ತೊಮ್ಮೆ ಮೋಸ ಮಾಡುತ್ತಿದೆ. ಸಿಲಿಂಡರ್ ದರ ಭಾರೀ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಜನವಿರೋಧಿಯಾಗಿದೆ. ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೆಲವು ರಾಜ್ಯಗಳ ಚುನಾವಣೆ ಮುಗಿದ ತತ್ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ ಹೋಟೆಲ್ ಮಾಲೀಕರು ಈಗಾಗಲೇ ಬೆಲೆ ಏರಿಕೆಯ ಒತ್ತಡ ಅನುಭವಿಸುತ್ತಿದ್ದು. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯ ನಿರ್ಧಾರದಿಂದ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಹೀಗಾಗಿ ಕೂಡಲೇ ಜನರ ಜೀವನೋಪಾಯವನ್ನು ಕಷ್ಟಕರಗೊಳಿಸುವ ಬದಲು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Key words: Minister, Lakshmi Hebbalkar, Cetral government, cylinder price, hike







