ಕಲಬುರುಗಿ,ಮೇ,1,2026 (www.justkannada.in): ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 993 ರೂ. ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಹೆಚ್ಚಿಸಿದ್ದಾರೆ. ಆಗ ಮೋದಿ ದರ ಏರಿಕೆ ಮಾಡುವುದಿಲ್ಲ ಅಂದಿದ್ದರು. ಆದರೆ ರಾತ್ರೋರಾತ್ರಿ ಬೆಲೆ ಏರಿಕೆ ಮಾಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು.
ಹಾಗೆಯೇ ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದರೂ ಜನ ಮೋದಿಯನ್ನೇ ಬೆಂಬಲಿಸುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.
Key words: People, support, Modi, price hike, Mallikarjun Kharge







