Friday, September 18, 2026

BDA Apartments

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥ...
Home Front Page ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ  ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದಾಗಿದೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿತ್ತು.  ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಹೀಗಾಗಿ ವಿನಯ್ ಕುಲಕರ್ಣಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ವಿಶೇಷ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿದೆ.

Key words: Vinay Kulkarni, MLA, Cancel, life imprisonment, murder case