ಕೇಂದ್ರದ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮೇ,9,2026 (www.justkannada.in):  ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೂ ಮುನ್ನ ನಮ್ಮೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿಲ್ಲ. ಇದು ಸಂವಿಧಾನ ವಿರೋಧಿ ನಿರ್ಧಾರ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆ ಆಗುವಂತಹ ಯೋಜನೆ ತರುವುದಕ್ಕೂ ಮುನ್ನ ರಾಜ್ಯಗಳ ಗಮನಕ್ಕೆ ತರಬೇಕು. ಆದರೆ ಕೇಂದ್ರ ಸರ್ಕಾರ ಇದನ್ನ ಏಕಪಕ್ಷೀಯವಾಗಿ ಜಾರಿಗೊಳಿಲು ಮುಂದಾಗಿದೆ ಎಂದು ಟೀಕಿಸಿದರು.

ವಿಬಿ ಗ್ರಾಮ್ ಜಿ ಕಾಯ್ದೆ ಯಾವಾಗ ಅನುಷ್ಠಾನವಾಗಲಿದೆ. ಎಷ್ಟು ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಅನುದಾನದ ಕುರಿತಂತೆಯೂ ಸ್ಪಷ್ಟತೆಯಿಲ್ಲ. ಸಂವಿಧಾನ ವಿರೋಧಿಯಾಗಿ ಜಾರಿಗೆ ಮುಂದಾಗಿರುವ ಕೇಂದ್ರದ ವಿರುದ್ದ ಹೋರಾಟ ಮಾಡುವುದಾಗಿ ತಿಳಿಸಿದರು.

Key words: Legal fight, against , VBG Ram Ji Act, Minister, Priyank Kharge