ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ನಲ್ಲಿ FIR ದಾಖಲು..!

ಗದಗ,ಮೇ,14,2026 (www.justkannada.in): ಗದಗ ಜಿಲ್ಲೆ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಈಗ  ಮತ್ತೊಂದು  ಸಂಕಷ್ಟ ಶುರುವಾಗಿದ್ದು, ಸ್ವಾಮೀಜಿ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ವಚನಾನಂದ ಸ್ವಾಮೀಜಿ ವಿರುದ್ದ ಕೇಳಿ ಬಂದಿದೆ. ಈ ಸಂಬಂಧ  ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನನ್ವಯ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಮೇ 7ರಂದು ಮೊದಲ ಬಾರಿಗೆ ಪ್ರಕರಣ ದಾಖಲಾಗಿತ್ತು. ಇದೀಗ ಎಫ್ ಐಆರ್ ದಾಖಲಾಗಿದೆ.

ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ, ಲಕ್ಷ್ಮೇಶ್ವರ ಪೊಲೀಸರು ಈ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿರುವ ಹರಿಹರ ಠಾಣಾ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ವಚನಾನಂದ ಸ್ವಾಮೀಜಿ ಅವರಿಗೆ ಈಗಾಗಲೇ ಅಧಿಕೃತ ನೋಟಿಸ್ ಜಾರಿ ಮಾಡಿದ್ದು ವಜನಾನಂದ ಸ್ವಾಮೀಜಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.

Key words: FIR, registered, against, Vachanananda Swamiji , POCSO case