ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ- ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮೇ,15,2026 (www.justkannada.in): ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು  ಒತ್ತಾಯಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿರ್ಧಾರ ಖಂಡಿಸಿದ ಸಿಎಂ ಸಿದ್ದರಾಮಯ್ಯ,

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್  ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆಏರಿಕೆಯ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದರು.

ಬೆಲೆ ಏರಿಕೆಯಿಂದ ದಿನನಿತ್ಯದ ವಸ್ತುಗಳೂ ತುಟ್ಟಿ

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ ಪಿ ಜಿ ದರ  ಈಗ 1000 ರೂಗಳನ್ನು ದಾಟಿದೆ. ಈ ಬೆಲೆಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ ಎಂದರು.

ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ. ಇದು ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಹೀಗಾಗಿ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯನ್ನ 3 ರೂ. ಹೆಚ್ಚಳ ಮಾಡಿದೆ.

 

Key words: Revoke, petrol and diese, pric,e hike ,CM Siddaramaiah