ಬೆಂಗಳೂರು,ಮೇ,15,2026 (www.justkannada.in): ನನ್ನ ಕೈಲಾದ ಮಟ್ಟಿಗೆ ರಾಜ್ಯದ ಜನತೆಗಾಗಿ ಹೋರಾಟ ಮಾಡಲು ಸಂಕಲ್ಪ ಮಾಡಿದ್ದೇನೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದ್ದಾರೆ.
ಇಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹುಟ್ಟುಹಬ್ಬ ಸಂಭ್ರಮವಾಗಿದೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ರಾಜ್ಯದ ಜನತೆಗಾಗಿ ನಾನು ಹೋರಾಟ ಮಾಡುತ್ತೇನೆ. ಜನರಿಗಾಗಿ ಹೋರಾಟ ಮಾಡಬೇಕು ಎಂದು ಸಂಕಲ್ಪ ಮಾಡಿದ್ದೇನೆ. 93 ವರ್ಷ ಆಯಿತು ಎಂದು ನಾನು ಮನೆಯಲ್ಲೇ ಕುಳಿತುಕೊಳ್ಳಲ್ಲ. ಮೇ 20 ರಂದು ಸುದ್ದಿಗೋಷ್ಠಿ ಮಾಡಿ ಮಾತನಾಡುತ್ತೇನೆ. ದೇಶದ ರಾಜ್ಯದ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
ಮೋದಿ ತುಂಬಾ ಒಳ್ಳೆಯ ಸಂದೇಶ ಕಳುಹಿಸಿದ್ದಾರೆ. ಎನ್ ಡಿಎನಲ್ಲಿ ಮೋದಿ ನಮ್ಮ ಸಂಬಂಧದ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ. ಏನೇ ಸಮಸ್ಯೆಗಳು ಬಂದರೂ ಬಗೆಹರಿಸಿಕೊಳ್ಳುತ್ತೇವೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.
Key words: determined, fight, people, Former PM, H.D. Deve Gowda.







