Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಕೆಎಸ್‌ ಆರ್‌ಟಿಸಿ  ಎಂ.ಡಿ ಅಕ್ರಂ ಪಾಷಾ ಶಾಕ್ ನೀಡಿದ್ದು ಮುಷ್ಕರದಲ್ಲಿ ಭಾಗಿಯಾಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ ...

ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ  ‘ನೋ ವರ್ಕ್ ನೋ ಪೆ’ ಆದೇಶ ಜಾರಿ ಮಾಡಲಿದ್ದಾರೆ. ಅಂದರೆ ಅಂದು ಯಾವುದೇ ವೇತನವನ್ನು ನೀಡಲಾಗುವುದಿಲ್ಲ. ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಕ್ರಂಪಾಷ ತಿಳಿಸಿದ್ದಾರೆ.

ಮುಷ್ಕರದ ಅವಧಿಯಲ್ಲಿ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಮತ್ತು ಈಗಾಗಲೇ ರಜೆ ಪಡೆದಿರುವವರ ರಜೆಯನ್ನು (ಅತ್ಯಗತ್ಯ ಸಂದರ್ಭಗಳನ್ನು ಹೊರತುಪಡಿಸಿ) ರದ್ದುಗೊಳಿಸುವಂತೆ ಅಧಿಕಾರಿಗಳಿಗೆ  ಎಂ.ಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ jk02_new jk02 new

Key words: Transport, employees, strike, KSRTC