Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಭ್ರಷ್ಟಾಚಾರ, ಕಮಿಷನ್ ಆರೋಪ: ಸಿಎಂ, ಡಿಸಿಎಂ ಉತ್ತರಿಸದೇ ಮೌನ- ಶಾಸಕ ಸುರೇಶ್ ಗೌಡ

ಭ್ರಷ್ಟಾಚಾರ, ಕಮಿಷನ್ ಆರೋಪ: ಸಿಎಂ, ಡಿಸಿಎಂ ಉತ್ತರಿಸದೇ ಮೌನ- ಶಾಸಕ ಸುರೇಶ್ ಗೌಡ

ತುಮಕೂರು,ಮೇ,18,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಭ್ರಷ್ಟಾಚಾರ ಕಮಿಷನ್ ಆರೋಪ ಕೇಳಿ ಬರುತ್ತಿದೆ ಆದರೆ  ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಇದಕ್ಕೆ ಉತ್ತರ ನೀಡದೆ ಮೌನ ವಹಿಸಿದ್ದಾರೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುರೇಶ್ ಗೌಡ, ಕಾಂಗ್ರೆಸ್ ಬಂದು 3 ವರ್ಷ ಆಗುತ್ತಿದೆ  ಗ್ಯಾರಂಟಿ ಯೋಜನೆಗಳನ್ನ ಅನುಷ್ಟಾನಗೊಳಿಸಿದ್ದೀರಿ.  ಗೃಹಲಕ್ಷ್ಮಿ ಯೋಜನೆ ಹಣವನ್ನ ಸಮರ್ಪಕವಾಗಿ ನೀಡುತ್ತಿಲ್ಲ.  ಈ ವಿಚಾರವನ್ನು ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಒಪ್ಪಿಕೊಂಡಿದ್ದಾರೆ. ಹಣ ನೀಡಲು ಆಗದಿದ್ರೆ ಯಾಕೆ ಯೋಜನೆ ಜಾರಿ ಮಾಡಬೇಕಿತ್ತು ಎಂದು ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭ್ರಷ್ಟಾಚಾರದ ಬಗ್ಗೆ ಗುತ್ತಿಗೆದಾರರು ಆರೋಪ ಮಾಡುತ್ತಿದ್ದಾರೆ . ನಮ್ಮ ಸರ್ಕಾರ ಇದ್ದಾಗ 40 ಪರ್ಸೆಂಟ್ ಆರೋಪ ಮಾಡಿದ್ರು.  ಈ ಸರ್ಕಾರದ ವಿರುದ್ದ 80  ಕಮಿಷನ್ ಆರೋಪ ಮಾಡುತ್ತಿದ್ದಾರೆ.  ಆದರೆ ಇದರ ಬಗ್ಗೆ ಸಿಎಂ, ಡಿಸಿಎಂ ಉತ್ತರಿಸದೆ ಮೌನ ವಹಿಸಿದ್ದಾರೆ  ಎಂದು ಹರಿಹಾಯ್ದರು.

Key words: Corruption, commission, allegations:, MLA, Suresh Gowda