ರಾಮನಗರ,ಮೇ,19,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಥ್ ನಾರಾಯಣ್, ಕೊಲೆಗಡುಕರ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಒಬ್ಬರು ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿದ್ದರೇ ಮತ್ತೊಬ್ಬರು ಕುರ್ಚಿ ಎಳೆಯುವವರಾಗಿದ್ದಾರೆ ಎಂದು ಲೇವಡಿ ಮಾಡಿದರು.
ಎಲ್ಲಾ ಇಲಾಖೆಯಲ್ಲಿ 70 ಪರ್ಸೆಂಟ್ ಹಣಕ್ಕೆ ಕಡಿವಾಣ ಹಾಕಿದ್ದಾರೆ. ಜಾತಿ ಆಧಾರವಾಗಿ ಮೀಸಲಾತಿ ಕೊಡಬೇಕು. ಸರ್ಕಾರದಲ್ಲಿ ಎಲ್ಲೆಡೆ ಭ್ರಷ್ಟಾಚಾರ ನಡೆಯುತ್ತಿದೆ. ಈ ಕಾಂಗ್ರೆಸ್ ಸರ್ಕಾರದಲ್ಲಿರುವವರಿಗೆ ಆತ್ಮಸಾಕ್ಷಿ ಇಲ್ಲ ಎಂದು ಶಾಸಕ ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದರು.
Key words: power, CM, DCM, MLA, Ashwath Narayan







