Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಬೆಂಗಳೂರು,ಮೇ,19,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ ಅನುಭವಿಸುತ್ತಿರುವ  ಆರೋಪಿ ನಟ ದರ್ಶನ್ ರನ್ನು ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಜೈಲಿನಲ್ಲೇ ಭೇಟಿಯಾಗಿದ್ದಾರೆ.

ಇಂದು ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ 23ನೇ ಮದುವೆ ವಾರ್ಷಿಕೋತ್ಸವವಾಗಿದ್ದು ಹಾಗಾಗಿ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗು ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ ಪತ್ರವೊಂದನ್ನು ಬರೆದು ಮನವಿ ಮಾಡಿದ್ದರು.

ಜೈಲಿನ ನಿಯಮಾವಳಿಗಳ ಪ್ರಕಾರ ನಟ ದರ್ಶನ್ ಮನವಿಗೆ ಅನುಮತಿ ನೀಡಲಾಗಿದ್ದು ಇದೀಗ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್  ಭೇಟಿಯಾಗಿದ್ದಾರೆ ಎನ್ನಲಾಗಿದೆ.ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ jk02_new jk02 new

Key words: Actor, Darshan, meets, wife ,Vijayalakshmi, son, Vineesh ,jail