ಕಲಬುರಗಿ,ಮೇ,23,2026 (www.justkannada.in): ಲಾರಿ ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾರಪುರ ತಾಲೂಕಿನ ಲಾಡ್ಲಾಪುರ- ಹಲಕರ್ಟಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಘಟನೆ ನಡೆದಿದೆ. ಹುಸನ್ ಶಾ(48), ಮೆಹಬೂಬ್ ಆಲಿ(45), ಫಾತಿಮಾ ಆಲಿ(38), ರಸೂಲ್ ಬೀ(42), ತೋಲುಸಾಬ್ ಕ್ಯಾಶ್ವರ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ಮತ್ತು ವಾಡಿಯಿಂದ ಯಾದಗಿರಿ ಮಾರ್ಗವಾಗಿ ಚೆನ್ನೈಗೆ ತೆರಳುತ್ತಿದ್ದ ಲಾರಿ ಪರಸ್ಪರ ಡಿಕ್ಕಿಯಾಗಿ ಅ ದುರ್ಘಟನೆ ಸಂಭವಿಸಿದೆ.
ಅಪಘಾತದ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀವಾಸಲು, ಡಿವೈಎಸ್ ಪಿ ಶಂಕರಗೌಡ ಪಾಟೀಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: accident, lorry-cruiser, Five members, Death







