Friday, August 21, 2026

BDA Apartments

Home Cinema ದಾವೂದ್ ಇಬ್ರಾಹಿಂ ಆಪ್ತನೊಂದಿಗೆ ವ್ಯವಹಾರ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸಂಕಷ್ಟ

ದಾವೂದ್ ಇಬ್ರಾಹಿಂ ಆಪ್ತನೊಂದಿಗೆ ವ್ಯವಹಾರ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸಂಕಷ್ಟ

ಮುಂಬೈ, ಅಕ್ಟೋಬರ್ 30, 2019 (www.justkannada.in): ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಇಕ್ಬಾಲ್ ಮಿರ್ಚಿಯ ಆರ್ಥಿಕ ಅವ್ಯವಹಾರದ ಜೊತೆಗೆ ಸಂಬಂಧ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ರಾಜ್ ಕುಂದ್ರಾಗೆ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇಕ್ಬಾಲ್ ಮಿರ್ಚಿಗಾಗಿ ಕೆಲಸ ಮಾಡುತ್ತಿದ್ದ ಆರೋಪಿಯೊಬ್ಬನ ಜೊತೆಗೆ ರಾಜ್ ಕುಂದ್ರಾ ವ್ಯವಹಾರ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.