Friday, October 9, 2026

BDA Apartments

Home Front Page ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,25,2026 (www.justkannada.in):  ನಾಳೆ ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್  ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ.

ನಾಳೆ ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.  ನಿನ್ನೆಯ ಎಸ್ಐಆರ್ ಮೀಟಿಂಗ್ ನಡುವೆ  ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ನಾಯಕರು ಫೋನ್ ಕರೆ  ಮಾಡಿದ್ದು ಕರ್ನಾಟಕದತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ

ದೆಹಲಿ ಭೇಟಿ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಲಿದೆಯೇ? ಅಥಾವ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ಆಗಲಿದೆಯೇ? ಎಂಬುದನ್ನ ಕಾದು ನೋಡಬೇಕಿದೆ.ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ jk02_new jk02 new

Key words: CM, Siddaramaiah, Delhi, tomorrow