ಹೈಕಮಾಂಡ್ ಕರೆದ್ರೆ ದೆಹಲಿಗೆ ಹೋಗ್ತೀನಿ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,25,2026 (www.justkannada.in): ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು ಈ ಮಧ್ಯೆ ತಮಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿಲ್ಲವೇ ಎಂಬ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

ಈಗಲೂ ಬರೆದಿಟ್ಟುಕೊಳ್ಳಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ

ಹಾಗೆಯೇ ಈ ಹಿಂದೆ ಕಾಂಗ್ರೆಸ್ ಗೆ 136 ಸ್ಥಾನ  ಬರುತ್ತೆಂದೆ ಹೇಳಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದಿದ್ದೇವೆ.  ಈಗಲೂ ಬರದಿಟ್ಟುಕೊಳ್ಳಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ.  2028ಕ್ಕೂ ಇದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

Key words:  Delhi, high command, DCM, DK Shivakumar