Friday, September 11, 2026

BDA Apartments

Home Front Page ನಾಳೆ ಎಲ್ಲವನ್ನೂ ಮಾತನಾಡುತ್ತೇನೆ- ಸಿಎಂ ಸಿದ್ದರಾಮಯ್ಯ

ನಾಳೆ ಎಲ್ಲವನ್ನೂ ಮಾತನಾಡುತ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,27,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಾಗುತ್ತಿದ್ದು, ನಾಳೆ ಈ ವಿಚಾರಕ್ಕೆ ಅಂತಿಮ ತೆರೆ ಬೀಳಲಿದೆ.

ಹೌದು ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಸಭೆ ನಡೆಸಿದ ವಿಚಾರದ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇಂದು ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಪುಣ್ಯತಿಥಿ  ಹಿನ್ನೆಲೆಯ ವಿಧಾನಸೌಧದಲ್ಲಿನ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಇವತ್ತು ಜವಾಹರ್ ಲಾಲ್ ನೆಹರು ಅವರ ಪುಣ್ಯತಿಥಿ  ದೇಶಾದ್ಯಂತ ನೆಹರು ಪುಣ್ಯತಿಥಿ ಆಚರಿಸಲಾಗುತ್ತಿದೆ ಎಂದರು.

ದೆಹಲಿ ಭೇಟಿ, ಹೈಕಮಾಂಡ್ ಜೊತೆ ಮಾತುಕತೆಯಾದ ವಿಚಾರದ  ಬಗ್ಗೆ ನಾಳೆ ಮಾತನಾಡುತ್ತೇನೆ   ಎಲ್ಲವನ್ನೂ ನಾಳೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Delhi meeting,  talk, tomorrow, CM Siddaramaiah