Friday, September 11, 2026

BDA Apartments

Home Front Page ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ  -ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ  -ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮೈಸೂರು,ಮೇ,27,2026 (www.justkannada.in):  ನಾಳೆ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವಿಚಾರ ಬಾರೀ ಚರ್ಚೆಯಾಗುತ್ತಿದ್ದು, ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆದರೆ ಅಷ್ಟೆ.   ಹೋದೆಯಾ ಪೀಶಾಚಿ ಅಂದರೆ ಬಂದೆ ಗವಾಕ್ಷಿಲಿ ಅಷ್ಟೆ.  ಸಿದ್ದರಾಮಯ್ಯ ಹೋಗಿ ಡಿಕೆ ಶಿವಕುಮಾರ್ ಬಂದರೂ ಅಷ್ಟೆ. 2028ರಲ್ಲಿ ಬಿಜೆಪಿಗೆ 150 ಸ್ಥಾನ ಬರುತ್ತದೆ ಎಂದು  ಛಲವಾದಿ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Key words: DK Shivakumar, will, become, CM , crying, Chalavadi Narayanaswamy