Thursday, October 15, 2026

Dasara Wishes

Happy Dasara
Home Front Page ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ-ರಣದೀಪ್ ಸಿಂಗ್ ಸುರ್ಜೇವಾಲ

ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ-ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಮೇ,27,2026 (www.justkannada.in): ಸಿಎಂ ಬದಲಾವಣೆ ವಿಚಾರ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಶಾಸಕಾಂಗ ಪಕ್ಷದ ಸಭೆಯನ್ನ ಸದ್ಯಕ್ಕೆ ಕರೆದಿಲ್ಲ. ಸದ್ಯಕ್ಕೆ ಯಾವುದೇ ನಿರ್ಧಾರವನ್ನ ತೆಗೆದುಕೊಂಡಿಲ್ಲ ನಿರ್ಧಾರ ಕೈಗೊಂಡಿದ್ದರೇ ನಾವೇ ಹೇಳುತ್ತೇವೆ ಕರ್ನಾಟಕದ ಜನ ಹಿತ ಕಾಪಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ. ಕಾಂಗ್ರೆಸ್ ಹೈಕಮಾಂಢ್ ಸದ್ಯಕ್ಕೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಎರಡನೇ ಅವಧಿಯಲ್ಲಿ ಸಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ಡಿಕೆ ಶಿವಕುಮಾರ್ ಕೂಡ ಹಲವು ಸಿಎಂಗಳ ಜೊತೆ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದರು.

Key words: Congress, high command,  decision, Randeep Singh Surjewala