Thursday, October 15, 2026

Dasara Wishes

Happy Dasara
Home Front Page ಮತ್ತಷ್ಟು ಕುತೂಹಲ: ಇಂದು ಸಂಜೆ ಮತ್ತೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ಮತ್ತಷ್ಟು ಕುತೂಹಲ: ಇಂದು ಸಂಜೆ ಮತ್ತೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,28,2026 (www.justkannada.in): ರಾಜ್ಯ ರಾಜಕೀಯದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಸಂಜೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಎಐಸಿಸಿ (AICC) ಹಿರಿಯ ಮುಖಂಡರನ್ನು ಭೇಟಿ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಹೈಕಮಾಂಡ್ ಮಟ್ಟದ ಚರ್ಚೆಗಳು ಹಾಗೂ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ಇದಕ್ಕೂ ಮೊದಲು ಇಂದು ಮಧ್ಯಾಹ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಲೋಕಭವನದಲ್ಲಿ ಭೇಟಿ ಮಾಡುವ ಬಗ್ಗೆ ಮಾಹಿತಿ ಹೊರಬಿದ್ದಿತ್ತು. ರಾಜೀನಾಮೆ ವಿಚಾರದ ಹಿನ್ನೆಲೆಯಲ್ಲಿ ಸಿಎಂ ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಬಹುದು ಎಂಬ ಮಾತುಗಳು ಕೇಳಿಬಂದಿದ್ದವು.ಮತ್ತಷ್ಟು ಕುತೂಹಲ: ಇಂದು ಸಂಜೆ ಮತ್ತೆ ದೆಹಲಿಗೆ ಸಿಎಂ ಸಿದ್ದರಾಮಯ್ಯ siddaramaiah.jpg 321

ಆದರೆ ಬುಧವಾರ ತಡರಾತ್ರಿ ರಾಜ್ಯಪಾಲರು ದಿಢೀರನೆ ಮುಂಬೈಗೆ ತೆರಳಿರುವುದರಿಂದ ಇಂದು ಅವರ ಭೇಟಿಯ ಸಾಧ್ಯತೆ ಕೈ ತಪ್ಪಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ದೆಹಲಿ ಹೈಕಮಾಂಡ್ ಭೇಟಿಗೆ ಮುಂದಾಗಿರುವುದು ರಾಜಕೀಯ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.

ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ, ಸಮನ್ವಯ ಸೂತ್ರ, ಡಿಕೆ ಶಿವಕುಮಾರ್ ಪಾತ್ರ ಸೇರಿದಂತೆ ಹಲವು ವಿಷಯಗಳ ಕುರಿತು ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ.

ಇದೀಗ ಸಿಎಂ ದೆಹಲಿ ಭೇಟಿಯ ನಂತರ ರಾಜ್ಯ ರಾಜಕೀಯದಲ್ಲಿ ಯಾವ ರೀತಿಯ ತೀರ್ಮಾನಗಳು ಹೊರಬೀಳುತ್ತವೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.ಮತ್ತಷ್ಟು ಕುತೂಹಲ jk02_new jk02 new

ENGLISH SUMMARY..

Karnataka Chief Minister Siddaramaiah is likely to visit Delhi this evening amid sudden political developments in the state. The move comes after intense speculation over his possible resignation.

Sources said Siddaramaiah is planning to meet senior AICC leaders to discuss the ongoing political situation and leadership-related developments.

Earlier, the CM was expected to meet Karnataka Governor Thawar Chand Gehlot at Raj Bhavan this afternoon. However, the meeting became unlikely after the Governor suddenly left for Mumbai late Wednesday night.

Following this, Siddaramaiah has reportedly decided to meet the Congress high command in Delhi, triggering fresh political curiosity in Karnataka.

Key words: CM, Siddaramaiah, Delhi, this, evening